ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿದ ಘಟನೆ ಸುಳ್ಯದ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ನಡೆದಿದೆ.
ತಿಂಗಳಾಡಿಯ ವಸಂತ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಬುಧವಾರ ಮುಂಜಾನೆ ಆರು ಗಂಟೆಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗುತ್ತಿದ್ದರು ಎನ್ನಲಾಗಿದೆ.