ಸುರತ್ಕಲ್: ನಾಪತ್ತೆಯಾಗಿದ್ದ ನಾಲ್ಕು ವಿದ್ಯಾರ್ಥಿಗಳ ಮೃತದೇಹ ನದಿಯಲ್ಲಿ ಪತ್ತೆ

ಮಂಗಳೂರು: ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿ ಸಮೀಪದ ಡ್ಯಾಂನಲ್ಲಿ ಪತ್ತೆಯಾಗಿದೆ.

10ನೇ ತರಗತಿ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ಮಂಗಳವಾರ ಪೂರ್ವ ಸಿದ್ಧತಾ ಪರೀಕ್ಷೆ ಬರೆದು ಬಳಿಕ ನಾಪತ್ತೆಯಾಗಿದ್ದರು.

ಪೋಷಕರ ದೂರಿನ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರಿಗೆ ವಿದ್ಯಾರ್ಥಿಗಳು ಹಳೆಯಂಗಡಿ ತೆರಳಿರುವುದು ತಿಳಿದು ಬಂದಿದೆ. ಅಲ್ಲಿ ನೋಡಿದಾಗ ವಿದ್ಯಾರ್ಥಿಗಳ ಸಮವಸ್ತ್ರ, ಚಪ್ಪಲಿ, ಬ್ಯಾಗ್‌ಗಳು ಪತ್ತೆಯಾಗಿದೆ.

ನೀರಿನಲ್ಲಿ ಈಜಲು ತೆರಳಿದಾಗ ಈ ಘಟನೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

Latest Indian news

Popular Stories