ಮಂಗಳೂರು, ಸೆ.29: ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಂಕಿಅಂಶಗಳ ಪ್ರಕಾರ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶನಿವಾರ ಸೆಪ್ಟೆಂಬರ್ 30 ಮಧ್ಯಾಹ್ನದವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾನುವಾರ ಮತ್ತು ಸೋಮವಾರ ಹಳದಿ ಅಲರ್ಟ್ ಘೋಷಿಸಲಾಗಿದೆ.ಗಾಳಿಯ ವೇಗ ಗಂಟೆಗೆ 55 ಕಿ.ಮೀ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.