ಉಳ್ಳಾಲ: ಸಮುದ್ರಕ್ಕೆ ಹಾರಿ ಖಾಸಗಿ ಬಸ್ ಚಾಲಕ ಆತ್ಮಹತ್ಯೆ

ಮಂಗಳೂರು: ಖಾಸಗಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.

ಕೊಂಡಾಣ ಬೆಳರಿಂಗೆಯ ಜಗದೀಶ್ (39) ಆತ್ಮಹತ್ಯೆ ಮಾಡಿಕೊಂಡ ಚಾಲಕ.

ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಮಹೇಶ್ 43 ನಂಬರಿನ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರ ಮೃತದೇಹ ಮಂಗಳವಾರ ಬೆಳಗ್ಗೆ ಸೋಮೇಶ್ವರ ಕಡಲ ತೀರದಲ್ಲಿ ಪತ್ತೆಯಾಗಿತ್ತು.
A
ಬೆಳಗ್ಗೆ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Latest Indian news

Popular Stories