2016ರಲ್ಲಿ ನಡೆದ ಉಳ್ಳಾಲ ರಾಜೇಶ್ ಕೋಟ್ಯಾನ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಉಳ್ಳಾಲದ ಮೊಗವೀರಪಟ್ಣ ನಿವಾಸಿ ರಾಜೇಶ್ ಕೋಟ್ಯಾನ್ ಕೊಲೆ ಪ್ರಕರಣ ಸಂಬಂಧ ನಾಲ್ಕು ಮಂದಿ ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿದೆ.

ಮುಹಮ್ಮದ್ ಆಸೀಫ್, ಮುಹಮ್ಮದ್ ಸುಹೈಲ್, ಅಬ್ದುಲ್ ಮುತಾಲಿಫ್, ಅಬ್ದುಲ್ ಅಸ್ವೀರ್ ಜೀವಾವಧಿ ಶಿಕ್ಷೆಗೆ ಒಳಗಾದವರು.
2016 ಎಪ್ರಿಲ್ 12ರಂದು ಮೀನುಗಾರಿಕೆಗೆ ತೆರಳಿದ್ದ ಉಳ್ಳಾಲ ಮೊಗವೀರಪಟ್ಣ ನಿವಾಸಿ ರಾಜ ಯಾನೆ ರಾಜೇಶ್ ಕೋಟ್ಯಾನ್‌ರನ್ನು ತಂಡವೊಂದು ಕೊಲೆ ಮಾಡಿತ್ತು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಎ.8ರಂದು ನಾಲ್ಕು ಮಂದಿ ಆರೋಪಿಗಳನ್ನು ದೋಷಿ ಎಂದು ಪರಿಗಣಿಸಿದ್ದು, ನಾಲ್ಕು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 25,000ರೂ. ದಂಡವನ್ನು ವಿಧಿಸಿದ್ದಾರೆ. ಸರಕಾರದ ಪರವಾಗಿ ಹಿರಿಯ ಸರಕಾರಿ ಅಭಿಯೋಜಕಿ ಜುಡಿತ್ ಕ್ರಾಸ್ತ ವಾದಿಸಿದ್ದರು.

Latest Indian news

Popular Stories