ಎರಡು ವರ್ಷದ ಮಗುವಿನ ಮೇಲೆ ಟಿಪ್ಪರ್ ಹರಿದು ಮೃತ್ಯು

ದಾವಣಗೆರೆ: ಟಿಪ್ಪರ್ ಹರಿದ ಪರಿಣಾಮ ಎರಡು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಹಳೇ ಕುಂದುವಾಡದಲ್ಲಿ ಸಂಭವಿಸಿದೆ.

ಕುಂದುವಾಡ ಗ್ರಾಮದ ಗಣೇಶ್ ಅವರ ಪುತ್ರಿ ಚರಸ್ವಿ ಸಾವನ್ನಪ್ಪಿದ ಬಾಲಕಿ. ಅಂಗನವಾಡಿ ಮುಗಿದ ನಂತರ ಮಧ್ಯಾಹ್ನ ತನ್ನ ಅಜ್ಜಿಯೊಂದಿಗೆ ಮನೆಗೆ ಬರುತ್ತಿದ್ದ ಬಾಲಕಿ ಮೇಲೆ ಟಿಪ್ಪರ್  ಹರಿದಿದೆ. ತಲೆ ಮೇಲೆಯೇ ಚಕ್ರ ಹರಿದ ರಭಸಕ್ಕೆ ಬಾಲಕಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಜಾಗರೂಕತೆಯಿಂದ ಲಾರಿ ಚಾಲನೆ ಮಾಡಿದ ಪರಿಣಾಮ ಪುಟ್ಟ ಜೀವ ಬಲಿಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಗ್ರಾಮಸ್ಥರು ಕೆಲ ಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಲಾರಿ ಚಾಲಕ, ಮಾಲಕನ ಬಂಧನಕ್ಕೆ ಒತ್ತಾಯಿಸಿದ್ದಾರೆ. ದಕ್ಷಿಣ ಸಂಚಾರಿ ಠಾಣೆ, ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Latest Indian news

Popular Stories