ಖಾಸಗಿ ಕ್ಷಣಗಳ ವಿಡಿಯೋ ವೈರಲ್: ಮನನೊಂದ ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ

ದಾವಣಗೆರೆ: ತಮ್ಮ ಖಾಸಗಿ ಕ್ಷಣಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಮನನೊಂದು ನಗರದ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು (ಯುವಕ ಯುವತಿ) ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದಲ್ಲಿ ಸಂಭವಿಸಿದೆ.

ಕಾಲೇಜಿನ ವಿದ್ಯಾರ್ಥಿಗಳಾದ ಯುವಕ ಯುವತಿಯರಿಬ್ಬರೂ ಪ್ರೇಮಿಗಳಾಗಿದ್ದು ಅವರು ಕೆಲ ದಿನಗಳ ಹಿಂದೆ ಕಾಲೇಜಿನ ಮಹಡಿ ಮೇಲೆ ಖಾಸಗಿ ಕ್ಷಣಗಳನ್ನು ಕಳೆದಿದ್ದರು. ಇದನ್ನು ಎದುರಿನ ಕಟ್ಟಡವೊಂದರಲ್ಲಿ ನಿಂತು ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ವಿಡಿಯೋ ತುಣುಕುಗಳು ಎಲ್ಲೆಡೆ ಹರಿದಾಡಿದ್ದರಿಂದ ಮನ ನೊಂದ ಯುವತಿ ಶುಕ್ರವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರೆ, ಈ ವಿಷಯ ತಿಳಿದು ಯುವಕ ಸಹ ಶುಕ್ರವಾರ ತಡರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾಲೇಜಿನ ಹುಡುಗ  ಹುಡುಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ವಿದ್ಯಾರ್ಥಿಗಳ ಪೋಷಕರು ಪ್ರತ್ಯೇಕ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಪ್ರತಿಕ್ರಿಯಿಸಿದ್ದಾರೆ.

Latest Indian news

Popular Stories