ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಸಿಎಂ 7ನೇ ವೇತನ ಆಯೋಗ ಘೋಷಣೆ: ಸಿ.ಎಸ್.ಷಡಾಕ್ಷರಿ

ದಾವಣಗೆರೆ, ಫೆಬ್ರವರಿ 21: ಫೆಬ್ರವರಿ 27 ರಂದು ಬೆಂಗಳೂರು ನಗರದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಭಾಗವಹಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 7ನೇ ವೇತನ ಆಯೋಗದ ಜಾರಿ, ಉಚಿತ ಆರೋಗ್ಯ ಯೋಜನೆ ಘೋಷಣೆ ಮಾಡುವ ಎಲ್ಲಾ ವಿಶ್ವಾಸವಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ‌ ಅವರು ವಿಶ್ವಾಸ ವ್ಯಕ್ತಪಸಿದ್ದಾರೆ.

ಮಂಗಳವಾರ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ‌ ಅವರು ಮಾತನಾಡಿ, ಫೆಬ್ರವರಿ 27 ರಂದು 7ನೇ ವೇತನ ಆಯೋಗದ ಜಾರಿ, ಉಚಿತ ಆರೋಗ್ಯ ಯೋಜನೆ ಘೋಷಣೆ ಮಾಡುವ ಎಲ್ಲಾ ವಿಶ್ವಾಸವಿದೆ. ಹೀಗಾಗಿ ಮಹಾ ಸಮ್ಮೇಳನದಲ್ಲಿ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನೌಕರರಲ್ಲಿ ಮನವಿ ಮಾಡಿದರು.

Latest Indian news

Popular Stories