ದಾವಣಗೆರೆ : ಮಕ್ಕಳಾಗಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ

ದಾವಣಗೆರೆ(ಡಿ.10): ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಲಿಲ್ಲ ಎಂದು ಮನನೊಂದು ಮನೆಯಲ್ಲೇ ನೇಣು ಬಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ಮಹಿಳೆ ರಾಧಿಕಾ(25) ಎಂಬುವರಿಗೆ ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಿರಲಿಲ್ಲ ಇದರಿಂದ ತೀವ್ರವಾಗಿ ಮನನೊಂದಿದ್ದರು ಎನ್ನಲಾಗಿದೆ. ಯಾರೂ ಇಲ್ಲದ ವೇಳೆ ಮನೆಯ ದೇವರ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸವನಹಳ್ಳಿ ಗ್ರಾಮದ ರಾಧಿಕಾರನ್ನು ದೊಡ್ಡೆತ್ತಿನಹಳ್ಳಿ ಗ್ರಾಮದ ಲೋಕೇಶ್‌ ಎಂಬವರಿಗೆ 6 ವರ್ಷದ ಹಿಂದೆ ಮದುವೆ ಮಾಡಿಕೊಡಲಾಗಿತ್ತು ಎಂದು ಮೃತರ ತಾಯಿ ನ್ಯಾಮತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Latest Indian news

Popular Stories