ಕಸ್ಟಡಿ ಸಾವು ಆರೋಪ ಪ್ರಕರಣ: ಪ್ರತಿಭಟನಾಕಾರರಿಂದ ದಾಳಿಗೊಳಗಾದ ಚನ್ನಗಿರಿ ಪೊಲೀಸ್ ಠಾಣೆಗೆ ರಘುಪತಿ ಭಟ್ ಭೇಟಿ

ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಲಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಗೆ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ‌ ಕೆ. ರಘುಪತಿ ಭಟ್ ಅವರು‌ ಇಂದು ಭೇಟಿ ನೀಡಿ ಘಟನೆಯ ವಿವರ ಪಡೆದು ಪೊಲೀಸರಿಗೆ ಮಾನಸಿಕ ಸ್ಥೈರ್ಯ ತುಂಬಿದರು.

ಕಸ್ಟಡಿ ಸಾವು ಆರೋಪಿಸಿ ಮೇ 24 ರಂದು ಚನ್ನಗಿರಿ ಪೊಲೀಸ್ ಠಾಣೆಗೆ ಉದ್ರಿಕ್ತರ ಗುಂಪು ತಡರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಇದರಲ್ಲಿ ಕೆಲವು ಮಂದಿ ಪೊಲೀಸರು ಗಾಯಗೊಂಡಿದ್ದರು. ಪೊಲೀಸರಿಗೆ ಆತ್ಮಸ್ಥೈರ್ಯ ತುಂಬಿ ದುಷ್ಕೃತ್ಯ ನಡೆಸಿದವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಸರ್ಕಾರ ಪೊಲೀಸ್ ಅಧಿಕಾರಿಗಳನ್ನೆ ಅಮಾಮತುಗೊಳಿಸಿರುವುದು ಖಂಡನೀಯ. ಈ ಕೃತ್ಯದಲ್ಲಿ ಭಾಗಿಯಾದ ಎಲ್ಲಾ ದುಷ್ಕೃರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕು ಎಂದು ರಘುಪತಿ ಭಟ್ ಅವರು ಒತ್ತಾಯಿಸಿದರು.

Latest Indian news

Popular Stories