ಬರ ಪರಿಹಾರ: ನ್ಯಾಯಕ್ಕಾಗಿ ಮರಳಿ ‘ಸುಪ್ರೀಂ’ ಮೊರೆ ಹೋಗುತ್ತೇವೆ; ಕಾಂಗ್ರೆಸ್

ದಾವಣಗೆರೆ: ಬರ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ನೀಡಬೇಕಾದ 18,174 ಕೋಟಿ ರೂ ಹಣದಲ್ಲಿ 3454 ಕೋಟಿ ರು. ಮಾತ್ರ ಕೇಂದ್ರ ಬಿಡುಗಡೆ ಮಾಡಿದೆ. ಇನ್ನೂ ಬಾಕಿ ಉಳಿದ 14,718 ಕೋಟಿ ರು. ಬರ ಪರಿಹಾರದ ಹಣ ನೀಡಲು ಮೋದಿ ಸರ್ಕಾರ ನಿರಾಕರಿಸಿದೆ. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತೊಮ್ಮೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರೈತರ 18,172 ಕೋಟಿ ರು. ಬರ ಬರ ಪರಿಹಾರ ನಿರಾಕರಿಸಿ, ಸೇಡಿನ ರಾಜಕಾರಣಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ. ನರೇಂದ್ರ ಮೋದಿ ನೇತೃತ್ವದ ಡಿಎನ್‌ಎ ಕರ್ನಾಟಕ ಮತ್ತು ಕನ್ನಡ ವಿರೋಧಿ ಎಂಬುದಂತೂ ಇದರಿಂದಲೇ ಸ್ಪಷ್ಟವಾಗಿದೆ. ಕರ್ನಾಟಕಕ್ಕೆ ಬರಬೇಕಾದ ಬಾಕಿ ಬರ ಪರಿಹಾರದ ಹಣಕ್ಕಾಗಿ ಕಾಂಗ್ರೆಸ್‌ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದೆ. ರಾಜ್ಯಕ್ಕೆ ಬರ ಪರಿಹಾರದ ನ್ಯಾಯವನ್ನು ನ್ಯಾಯಾಲಯದಿಂದಲೇ ಪಡೆಯಲಿದೆ ಎಂದು ಕೇಂದ್ರಕ್ಕೆ ಎಚ್ಚರಿಸಿದರು.

ಕರ್ನಾಟಕಕ್ಕೆ ನ್ಯಾಯವಾಗಿ ಬರಬೇಕಾದ ಬರ ಪರಿಹಾರದ ಹಣ ಸಂಪೂರ್ಣವಾಗಿ ಬಿಡುಗಡೆ ಮಾಡುವವರೆಗೂ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕ್ಕೆ ಬರಬಾರದು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನರ ಬೆಂಬಲ ಕೇಳುವ ಯಾವುದೇ ನೈತಿಕ ಹಕ್ಕು ಹೊಂದಿಲ್ಲ. ಈ ಅನ್ಯಾಯ ನಮ್ಮ ಪಕ್ಷದ ಅಭ್ಯರ್ಥಿಗಳು, ಶಾಸಕರು, ವಿಧಾನಪರಿಷತ್ ಸದಸ್ಯರು ಜನತಾ ನ್ಯಾಯಾಲಯಕ್ಕೆ ಒಯ್ಯುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಏನು ಮಾಡಬೇಕೆಂಬುದನ್ನೂ ನಿರ್ಧರಿಸುತ್ತಾರೆ ಎಂದು ಹೇಳಿದರು.

ಮೇ 7 ರಂದು ರಾಜ್ಯದ ಉಳಿದ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸುವಂತೆ ಮತದಾರರಿಗೆ ಮನವಿ ಮಾಡಿದರು, ಈ ಬಾರಿ ಚುನಾವಣಾ ಫಲಿತಾಂಶ ಬದಲಾಗಲಿದ್ದು, ಕಾಂಗ್ರೆಸ್ 25 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು

Latest Indian news

Popular Stories