ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನ್ಯಾಮತಿ ಬಳಿಯ ದಾನಿಹಳ್ಳಿಯಲ್ಲಿ ನಡೆದಿದೆ.
ಸಿದ್ದೇಶ್ (34) ಮೃತ ದುರ್ದೈವಿ. ದಾವಣಗೆರೆ ಡಿಎಆರ್ ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ದಾವಣಗೆರೆಯಿಂದ ಮಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ಭಾವನನ್ನು ಡಿಸ್ಚಾರ್ಜ್ ಮಡಿಸಿ ಕರೆತರಲೆಂದು ಸಿದ್ದೇಶ್ ಮಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಸಿದ್ದೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.