ಕರ್ನಾಟಕದಲ್ಲಿ ಬಿಜೆಪಿಗೆ ನಾಯಕತ್ವ ಇಲ್ಲದಂತಾಗಿದೆ – ಎಮ್. ಪಿ ರೇಣುಕಾಚಾರ್ಯ .

ದಾವಣಗೆರೆ : ಕರ್ನಾಟಕದಲ್ಲಿ ಬಿಜೆಪಿಗೆ ನಾಯಕತ್ವ ಇಲ್ಲದಂತಾಗಿದೆ ಎಂದು ಕಿಡಿ ಕಾರಿದ್ದಾರೆ.

ದಾವಣಗೆರೆಯಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಚರ್ಚೆ ನಡೆಸಿದ ಅವರು ಬಿಜೆಪಿ ಅವನತಿಯತ್ತ ಸಾಗುತ್ತಿದೆ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ ಅಂತ ಕೆಲ ಮುಖಂಡರು ಹೇಳುತ್ತಾರೆ. ಹೀಗೆ ಹೇಳುವ ವ್ಯಕ್ತಿ ತಮ್ಮದೇ ಗುಂಪು ಕಟ್ಟಿಕೊಂಡಿದ್ದಾರೆ ಇದ್ದರಿಂದ ಬಿಜೆಪಿ ಗೆ ತೊಂದರೆಯಾಗುವುದು ಖಚಿತ ಎಂದು ಬಿಜೆಪಿ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಬಿಎಸ್ ವೈ ಅವರನ್ನು ರಾಜಕೀಯವಾಗಿ ಮುಗಿಸಿದರು. ಪಕ್ಷವನ್ನು ಸಹ ಮುಗಿಸಿದರು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ನಾಯಕತ್ವವೇ ಇಲ್ಲದಂತಾಗಿದೆ ಇದೇ ಕಾರಣಕ್ಕೆ ಬಿಜೆಪಿ ನಾಯಕರು ಬೇರೆ ಪಕ್ಷದ ಕಡೆ ಮುಖ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Latest Indian news

Popular Stories