ದಾವಣಗೆರೆ: ‘ದೇಶ ವಿಭಜನೆ’ಯ ಹೇಳಿಕೆ ಕೊಡುವವರನ್ನು ‘ಗುಂಡಿಕ್ಕಿ ಕೊಲ್ಲಬೇಕು’ ಎಂಬುದಾಗಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದರು. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ವಿರುದ್ಧ ಹರಿಹಾಯ್ದಿದ್ದರು.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹನುಮಂತಪ್ಪ(36) ಎಂಬುವರು ನೀಡಿದ ದೂರಿನ ಆಧಾರದಲ್ಲಿ ಪೋಲೀಸರು ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತಂತೆ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ದೇಶವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದಂತ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ದೇಶದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದ್ದಾರೆ.