Dharwad
ಧಾರವಾಡದಲ್ಲಿ ಘೋರ ದುರಂತ ; ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಧಾರವಾಡ : ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಧಾರವಾಡ ಜಿಲ್ಲೆಯ ಮನಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು ಧಾರವಾಡದ ಮಾಳಮಡ್ಡಿಯ ಶ್ರೇಯಸ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಇನ್ನೋರ್ವ ಯುವಕನ ಶವದ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
ಘಟನೆ ನಡೆದ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.