ದಾರವಾಡ : ರಾಜ್ಯದಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶರಣುಮೊರಬ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಕ್ಕಳಾದ ನಾಲ್ಕು ವರ್ಷದ ದರ್ಶನ್ ಹಾಗೂ ಐದು ವರ್ಷದ ಸುಮಾ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ನೇಣು ಬಿಗಿದುಕೊಂಡು ಸಾವಿತ್ರಿ (32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.