ಬೆಂಗಳೂರು : ಜೂನ್ 12ರ ಇಂದಿನಿಂದ ಜೂ. 19ರವರೆಗೆ 2023ರ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ರಾಜ್ಯಾಧ್ಯಂತ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ 1.11 ಲಕ್ಷ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಒಟ್ಟು 458 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಾಗಿ 11,810 ಶಾಲೆಗಳ ನೋಂದಣಿ ಮಾಡಿಕೊಂಡಿವೆ. ಇಂದಿನಿಂದ ಆರಂಭಗೊಳ್ಳುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ 1,11,689 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಿಗದಿತ ದಿನಾಂಕದ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಮೊಬೈಲ್ ಪೇಜರ್, ಜಿರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿಧ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ.
KSRTC-BMTC’ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಜೂನ್ 12 ರಿಂದ 19 ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಮನೆಗೆ ವಾಪಸ್ ತೆರಳುವಾಗ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣಿಸಬಹುದಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುವಾಗ ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ಸಾರಿಗೆ ಸಂಸ್ಥೆಯ ಬಿಎಂಟಿಸಿ ಹಾಗೂ ಕೆಎಸ್‌ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ.