ದ್ವಿತೀಯ ಪಿಯುಸಿ ಪರೀಕ್ಷೆ: ಪ್ರವೇಶ ಪತ್ರ ಪ್ರಕಟ

ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ.

ಪ್ರವೇಶ ಪತ್ರಗಳನ್ನು ಮಂಡಳಿಯ ವೆಬ್‌ಸೈಟ್‌ //kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಇದನ್ನು ಪಿಯು ಪರೀಕ್ಷೆ ಪೋರ್ಟಲ್‌ನಲ್ಲಿ ಲಾಗಿನ್‌ ಆಗಿ ಎಲ್ಲ ಕಾಲೇಜಿನ ಪ್ರಾಂಶುಪಾಲರು ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಫೆ.24ರೊಳಗೆ ಎಲ್ಲ ವಿದ್ಯಾರ್ಥಿಗಳಿಗೆ ತಲುಪಿಸುವಂತೆ ಮಂಡಳಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories