ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಸ್ಲಿಂ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ನೇರವಾಗಿ ದಿನಾಂಕ : 16-02-2024 ರಿಂದ 15-03-2024ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಮೆರಿಟ್ ಅಥವಾ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ವಸತಿ ಶಾಲೆಗಳಲ್ಲಿ ಶೇ.50ರಷ್ಟು ಹೆಣ್ಣು ಮಕ್ಕಳಿಗಾಗಿ ಮೀಸಲಿರಿಸಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ನೋಟ್ಬುಕ್, ಲೇಖನಿ ಸಾಮಗ್ರಿಗಳು, ಸ್ಕೂಲ್ ಬ್ಯಾಗ್ ಹಾಗೂ ಊಟ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಝಾಧ ಭವನ, ಜಿಲ್ಲಾ ಪಂಚಾಯತ್, ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂ: 08352-295523, ತಾಲೂಕಾ ವಿಸ್ತರಣಾಧಿಕಾರಿ ವಿಜಯಪುರ ಮೊ: 9448986236, ಇಂಡಿ ತಾಲೂಕಾ ವಿಸ್ತರಣಾಧಿಕಾರಿ ಮೊ: 9900229780, ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಶಾಲೆ ಅರಕೇರಿ ಮೊ: 8971459683, ಸಿಂದಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ: 9980952960 ಹಾಗೂ ಚಡಚಣ ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಮೊ: 9620828185 ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.