ಮಂಗಳೂರು ವಿವಿ ಕುಲಪತಿಗಳಾಗಿ ಪ್ರೊ.ಪಿ.ಎಲ್.ಧರ್ಮ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ವಿವಿ ಕುಲಪತಿಗಳಾಗಿ ಪ್ರೊ.ಪಿ.ಎಲ್. ಧರ್ಮ ಅವರನ್ನು ನೇಮಕ ಮಾಡಿ ರಾಜ್ಯಪಾಲರೂ, ಮಂಗಳೂರು ವಿವಿ ಕುಲಾಧಿಪತಿಗಳಾಗಿರುವ ಥಾವರ್ ಚಂದ್ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಈ ಮೂಲಕ‌ ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಪ್ರೊ.ಪಿ.ಎಲ್. ಧರ್ಮ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಮಂಗಳೂರು ವಿವಿಯಲ್ಲಿ ಕುಲಸಚಿವ (ಮೌಲ್ಯಮಾಪನ)ರಾಗಿ ಕರ್ತವ್ಯ ನಿರ್ವಹಿಸಿದ್ದರು.

ಮುಂದಿನ ನಾಲ್ಕು ವರ್ಷಗಳ ಅವಧಿಯವರೆಗೆ ಅಥವಾ ಪ್ರೊ.ಪಿ.ಎಲ್. ಧರ್ಮ ಅವರಿಗೆ 67ವರ್ಷ ತುಂಬುವವರೆಗೆ, ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅವರು ಮಂಗಳೂರು ವಿವಿ ಕುಲಪತಿಗಳಾಗಿ ಮುಂದುವರಿಯಲಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಈ ಹಿಂದಿನ ಕುಲಪತಿಗಳಾಗಿದ್ದ ಪಿ‌.ಎಸ್.ಯಡಪಡಿತ್ತಾಯರ ಅಧಿಕಾರ ಅವಧಿ 2023ರ ಜೂನ್ 3ರಂದಿಗೆ ಮುಗಿದಿತ್ತು‌. ಆ ಬಳಿಕ ಮಂಗಳೂರು ವಿವಿಯ ಅತ್ಯಂತ ಹಿರಿಯ ಡೀನ್ ಆಗಿದ್ದ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಜಯರಾಜ್ ಅಮೀನ್ ಅವರನ್ನು ಹಂಗಾಮಿ ಕುಲಪತಿಗಳಾನ್ನಾಗಿ ನೇಮಕ ಮಾಡಲಾಗಿತ್ತು.

Latest Indian news

Popular Stories