ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅರ್ಜಿ ಆಹ್ವಾನ

ಬೀದರ, ಜೂನ್ 22 (ಕರ್ನಾಟಕ ವಾರ್ತೆ): ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2021-22ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಅಭಿಯಾನದಡಿಯಲ್ಲಿ ಸಮನ್ವಯ ಶಿಕ್ಷಕರ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಬ್ಲಾಕಗಳ ಬಿ.ಆರ್.ಸಿ. ಕೇಂದ್ರಗಳಲ್ಲಿ ಖಾಲಿ ಇರುವ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಹಾಗೂ ನೇರ ಗುತ್ತಿಗೆಯಡಿ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು ಸಮನ್ವಯ ಶಿಕ್ಷಣದಲ್ಲಿ ಡಿ.ಎಡ್/ಬಿ.ಎಡ್ (ವಿಶೇಷ) ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಗಂಗಣ್ಣ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಆಭ್ಯರ್ಥಿಗಳು ಜೂನ.23 ರೊಳಗಾಗಿ ಅಗತ್ಯ ಅರ್ಹ ವಿದ್ಯಾರ್ಹತೆಗಳ ಮೂಲ ದಾಖಲೆಗಳೊಂದಿಗೆ ಉಪನಿರ್ದೇಶಕರು(ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಬೀದರ ಇವರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ: ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು/ಕ್ಷೇತ್ರ ಸಮನ್ವಯಾಧಿಕಾರಿಗಳು, ಮತ್ತು ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಬೀದರ ಇವರನ್ನು ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories

error: Content is protected !!