ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.25ರಿಂದ, ಪಿಯು ಮಾ.2ರಿಂದ

ಕರ್ನಾಟಕ ಬೋರ್ಡ್ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿರುವ ವೇಳಾಪಟ್ಟಿ ಪ್ರಕಾರ, 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ ಮಾರ್ಚ್‌ 25 ರಿಂದ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 2ರಿಂದ ಶುರುವಾಗಲಿದೆ.

ಈ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ ಮಾರ್ಚ್‌ 25 ರಿಂದ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 2ರಿಂದ ಶುರುವಾಗಲಿದೆ.

ಪರೀಕ್ಷಾ ಮಂಡಳಿಯ ವೆಬ್‌ಸೈಟ್‌ನಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದ್ದು, ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರು ಈ ವೇಳಾಪಟ್ಟಿ ಕುರಿತು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 1 ರಿಂದ ಡಿಸೆಂಬರ್ 15ರ ವರೆಗೆ ಕಾಲಾವಕಾಶ ನೀಡಿರುವುದಾಗಿ ಮಂಡಳಿ ತಿಳಿಸಿದೆ.

ಆಕ್ಷೇಪಣೆಗಳನ್ನು ಮಂಡಳಿಯ ಇ-ಮೇಲ್‌ ವಿಳಾಸ [email protected] ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, ಎಸ್ಎಸ್‌ಎಲ್‌ಸಿ ಪರೀಕ್ಷೆಯು 2024ರ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ, ದ್ವಿತೀಯ ಪಿಯು ಪರೀಕ್ಷೆಯು 2024ರ ಮಾರ್ಚ್ 2 ರಿಂದ ಮಾರ್ಚ್ 22ರ ತನಕ ನಡೆಯಲಿದೆ.

ಎಸ್ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
25.03.2024 – ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎಸ್‌ಸಿಇಆರ್‌ಟಿ), ಸಂಸ್ಕೃತ,

27.03.2024 – ಸಮಾಜ ವಿಜ್ಞಾನ

30.03.2024 – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ /ಕರ್ನಾಟಕ ಸಂಗೀತ

02.04.2024 – ಗಣಿತ, ಸಮಾಜ ಶಾಸ್ತ್ರ

03.04.2024- ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ – IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್- IV, ಇಂಜಿನಿಯರಿಂಗ್ ಗ್ರಾಫಿಕ್ಸ್ – 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ – IV

04.04.2024 – ತೃತೀಯ ಭಾಷೆ ಹಿಂದಿ(ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್ ವಿಷಯಗಳಾದ (ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್‌ ವೆಲ್‌ನೆಸ್, ಅಪರೆಲ್ಸ್ ಮೇಡ್ ಆಪ್ಸ್ & ಹೋಮ್ ಫರ್ನಿಶಿಂಗ್ ಎಲೆಕ್ಟ್ರಾನಿಕ್ಸ್ & ಹಾರ್ಡ್ ವೇರ್)

06.04.2024 – ದ್ವಿತೀಯ ಭಾಷೆ(ಇಂಗ್ಲಿಷ್, ಕನ್ನಡ)

ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ
02.03.2024 – ಕನ್ನಡ, ಅರೇಬಿಕ್

04.03.2024 – ಇತಿಹಾಸ, ಭೌತಶಾಸ್ತ್ರ

05.-03.2024 – ಮಾಹಿತಿ ತಂತ್ರಜ್ಞಾನ, ರಿಟೈಲ್, ಅಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್‌ ವೆಲ್ನೆಸ್

06.03.2024 – ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ

07.03.2024 – ಹಿಂದಿ

09.03.2024 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

11.03.2024 – ಇಂಗ್ಲೀಷ್

12.03.2024 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

13.03.2024 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ (ಬಿಜಿನೆಸ್ ಸ್ಟಡೀಸ್)

14.03.2024 – ಗಣಿತ, ಶಿಕ್ಷಣ ಶಾಸ್ತ್ರ ಪರೀಕ್ಷೆ

16.03.2024 – ಭೌಗೋಳ ಶಾಸ್ತ್ರ, ಜೀವ ಶಾಸ್ತ್ರ

18.03.2024 – ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ಕೆಮಿಸ್ಟ್ರಿ, ಮೂಲ ಗಣಿತ

20.03.2024 – ಐಚ್ಛಿಕ ಕನ್ನಡ, ಅಕೌಂಟನ್ಸಿ, ಭೂವಿಜ್ಞಾನ, ಗೃಹ ವಿಜ್ಞಾನ

22.03.2024 – ಅರ್ಥಶಾಸ್ತ್ರ

Latest Indian news

Popular Stories