ಶುಲ್ಕ ಮರುಪಾವತಿ ಅವಧಿ ವಿಸ್ತರಣೆ

ಕಾರವಾರ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ( ಎಸ್ ಎಸ್ ಪಿ) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಅನ್‌ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದ್ದು, ಸದರಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ. 15 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in ಅಥವಾ SSP ಪೂರ್ಟಲ್ https://ssp.postmatric.karnataka.gov.in ಸಹಾಯವಾಣಿ: 8277799990ಗೆ ಸಂಪರ್ಕಿಸುವಂತೆ ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
……………..

Latest Indian news

Popular Stories