ಆಗಸ್ಟ್ 18 ರಿಂದ ಶಾಲಾ-ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ

ಬೆಂಗಳೂರು, ಆ.16 : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರವು ವಾರದಲ್ಲಿ ಎರಡು ಬಾರಿ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ವಿತರಿಸಲಿದೆ ಎಂದು ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬುಧವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸುವ ಯೋಜನೆ ಆ.18ರಿಂದ ಆರಂಭವಾಗಲಿದ್ದು, ಮೊದಲು ಮಂಡ್ಯ ಜಿಲ್ಲೆಯಲ್ಲಿ ಉದ್ಘಾಟನೆಗೊಳ್ಳಲಿದೆ

“ಈ ಹಿಂದೆ, ಯೋಜನೆಯನ್ನು 8 ನೇ ತರಗತಿಯವರೆಗೆ ವಿಸ್ತರಿಸಲು ಯೋಜಿಸಲಾಗಿತ್ತು. ಇದೀಗ ಈ ಯೋಜನೆಯನ್ನು 10ನೇ ತರಗತಿವರೆಗೆ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ’ ಎಂದು ವಿವರಿಸಿದರು.

ಮಧ್ಯಾಹ್ನದ ಊಟದ ಜತೆಗೆ ಮೊಟ್ಟೆ, ಬಾಳೆಹಣ್ಣು ನೀಡಲಾಗುವುದು ಎಂದರು.

ಈ ಹಿಂದೆ ಕರ್ನಾಟಕ ಸರ್ಕಾರದ ಈ ನಿರ್ಧಾರ ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿತ್ತು. 

ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಬಿಜೆಪಿ-ಜೆಡಿ (ಎಸ್) ಸಮ್ಮಿಶ್ರ ಸರ್ಕಾರವು ಧಾರ್ಮಿಕ ಗುಂಪುಗಳ ಒತ್ತಡಕ್ಕೆ ಮಣಿದು ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವ ಯೋಜನೆಯನ್ನು 2007 ರಲ್ಲಿ ಹಿಂತೆಗೆದುಕೊಂಡಿತ್ತು. ಆದರೆ, ಹಿಂದಿನ ಬಿಜೆಪಿ ಸರಕಾರ ಈ ಯೋಜನೆಯನ್ನು ಜಾರಿಗೆ ತಂದಿತ್ತು.

ಆಗ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಜನರ ವಿರೋಧ ಮತ್ತು ದೃಢೀಕರಣದ ನಡುವೆ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

“ಮೊಟ್ಟೆಗೆ ಯಾವುದೇ ಪರ್ಯಾಯವಿಲ್ಲ. ಸೋಯಾ ಬೀನ್ ಇದೆ. ಆದರೆ ಮಕ್ಕಳು ಅದನ್ನು ತಿನ್ನುವುದಿಲ್ಲ. ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ನಿವಾರಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದರು.

Latest Indian news

Popular Stories