EducationFeatured StoryState News

Karnataka 2nd PUC Time Table 2024: ಮಾರ್ಚ್ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ: ವೇಳಾ ಪಟ್ಟಿ ಪ್ರಕಟ

ಬೆಂಗಳೂರು, ಜನವರಿ 17: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ್ಟಿಸಿತ್ತು, ಇದೀಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ, ದಿನಾಂಕ ಹೀಗಿದೆ
01-03-2024: ಕನ್ನಡ ಹಾಗೂ ಅರೇಬಿಕ್
04-03-2024: ಗಣಿತ
05-03-2024: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
06-03-2024: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್
07-03-2024: ಇತಿಹಾಸ ಹಾಗೂ ಭೌತಶಾಸ್ತ್ರ
09-03-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
11-03-2024: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
13-03-2024: ಇಂಗ್ಲಿಷ್
15-03-2024: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
16-03-2024: ಅರ್ಥಶಾಸ್ತ್ರ
18-03-2024: ಭೂಗೋಳ ಶಾಸ್ತ್ರ, ಜೀವಶಾಸ್ತ್ರ
20-03-2024: ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
22-03-2024: ಹಿಂದಿ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button