Karnataka SSLC Class 10 Result 2024: ನಿಮ್ಮ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ

ಬೆಂಗಳೂರು, ಮೇ 6: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿ ಫಲಿತಾಂಶ ಪ್ರಕಟಿಸಲಿದೆ.

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಫಲಿತಾಂಶದ ಬಗ್ಗೆ ಬುಧವಾರ ಸಂಜೆ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಮಾರ್ಚ್ ಹಾಗೂ ಏಪ್ರಿಲ್​ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ 9ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂನಲ್ಲಿ ಸುದ್ದಿಗೋಷ್ಠಿ ಕರೆದಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ 10.30ರ ನಂತರ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿತ್ತು.

Latest Indian news

Popular Stories