Education

`ಹಿಜಾಬ್’ (ಶಿರವಸ್ತ್ರ) ಧರಿಸಿ ಪರೀಕ್ಷೆ ಬರೆಯಲು `KEA’ ಅನುಮತಿ

ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಮತಿ ನೀಡಿದೆ.

ರಾಜ್ಯದಲ್ಲಿ ಹಿಜಾಬ್ (ಶಿರವಸ್ತ್ರ) ಧರಿಸಿ ಶಾಲಾ-ಕಾಲೇಜುಗಳಿಗೆ ಹಾಜರಾಗುವ ವಿಚಾರ ಭಾರೀ ಸಂಘರ್ಷಕ್ಕೆ ಕಾರಣವಾಗಿತ್ತು.ಸಂಘ ಪರಿವಾರ ವಿದ್ಯಾರ್ಥಿನಿಯರು ಶಿರವಸ್ತ್ರ ಧರಿಸಿ ಬಂದ ಕಾರಣ ಕೇಸರಿ ಶಾಲು ಹಾಕಿ ಬಂದು ಗುಲ್ಲೆಬ್ಬಿಸಿತ್ತು.

ಇದೀಗ ಕೆಇಎ ವಿವಿಧ ನಿಗಮ ಮಂಡಳಿಗಳ ಹುದ್ದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶ ನೀಡಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್‌ಇ ಹಾಜರಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಎಂದು ಕೆಇಎ ತಿಳಿಸಿದೆ.

ಪರೀಕ್ಷೆಗೆ ಹಾಜರಾಗುವವರು ಪ್ರವೇಶ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 2 ಫೋಟೋ, ಸರ್ಕಾರದ ಮಾನ್ಯ ಮಾಡಿರುವ ಗುರುತಿನ ಚೀಟಿ ತರಬೇಕು. ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button