ನವೆಂಬರ್ 5ಕ್ಕೆ ಕೆ-ಸೆಟ್ ಪರೀಕ್ಷೆ: ಸೆ. 10ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ‌ ನಡೆಸುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆಪ್ಟೆಂಬರ್ 10ರಿಂದ ಆರಂಭವಾಗಲಿದೆ.

ಸೆ.5ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅದೇ ದಿನ ಮಾಹಿತಿ ಪುಸ್ತಕ ಕೂಡ ಪ್ರಕಟಿಸಲಾಗುತ್ತದೆ. ಸೆ.30 ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಶುಲ್ಕ ಪಾವತಿಸಲು ಅ.3 ಕೊನೆ ದಿನ. ನವೆಂಬರ್ 5ರಂದು ಲಿಖಿತ ಪರೀಕ್ಷೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ. ವಿಜ್ಞಾನ, ಮಾನವಿಕ ವಿಭಾಗಗಳ ಒಟ್ಟು 41 ವಿಷಯಗಳ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತದೆ. ಕೆಇಎ ಇದೇ ಮೊದಲು ಈ ಪರೀಕ್ಷೆ ನಡೆಸುತ್ತಿದೆ.

Latest Indian news

Popular Stories