ಎಂಬಿಬಿಎಸ್ ವೈದ್ಯರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ. MBBS

ಬೀದರ್ ಏಪ್ರಿಲ್ ೨೩ ಕರ್ನಾಟಕ ವಾರ್ತೆ: MBBS ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೀದರ್ ವತಿಯಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣ, ಭಾಲ್ಕಿ ಹಾಗೂ ಔರಾದ್ ತಾಲೂಕು ಕೋವಿಡ್ ಆರೋಗ್ಯ ಕೇಂದ್ರಗಳಿಗೆ ಪ್ರತಿ ತಾಲೂಕು ಆಸ್ಪತ್ರೆಗಳಿಗೆ ೩ ಎಂ.ಬಿ.ಬಿ.ಎಸ್. ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆರು ತಿಂಗಳ ಅವಧಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿಗೆ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳು ಎಲ್ಲ ಮೂಲ ದಾಖಲಾತಿಗಳನ್ನು ಹಾಗೂ ಅವುಗಳ ಒಂದು ಜೊತೆ ಜೆರಾಕ್ಸ್ ಪ್ರತಿ ಹಾಗೂ ಭಾವಚಿತ್ರದೊಂದಿಗೆ ಏಪ್ರಿಲ್ ೨೬ ಹಾಗೂ ೨೭ ೨೦೨೧ರಂದು ಕಚೇರಿ ವೇಳೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಾಲಯದಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಸಾಯಂಕಾಲ ೫ ಗಂಟೆಯವರೆಗೆ ಜರುಗುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಸೂಚಿಸಿದ್ದು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೀದರ್ ೯೪೪೯೮೪೩೧೦೦/ ೯೪೪೯೮೪೩೧೮೫ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Latest Indian news

Popular Stories