ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

ಕಲಬುರಗಿ.ಜೂನ್.೨೫.(ಕ.ವಾ)-೨೦೨೦-೨೧ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಈಗಾಗಲೇ ಎನ್.ಎಸ್.ಪಿ. ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ೨೦೨೧ರ ಜುಲೈ ೧ ರವರೆಗೆ ವಿಸ್ತರಿಸಲಾಗಿದೆ ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮಹಿಮೂದ್ ಅವರು ತಿಳಿಸಿದ್ದಾರೆ.
ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಭಾರತ ಸರ್ಕಾರದ ಎನ್.ಎಸ್.ಪಿ. ಅಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ರಾಜ್ಯ ವಿದ್ಯಾರ್ಥಿವೇತನ https://ssp.karnataka.gov.in/ ಪೋರ್ಟಲ್‌ದಲ್ಲಿ ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಭಾರತ ಸರ್ಕಾರದ ಎನ್.ಎಸ್.ಪಿ. ಅಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ರಾಜ್ಯ ವಿದ್ಯಾರ್ಥಿವೇತನ https://ssp.postmatric.karnataka.gov.in/signin.aspx ಪೋರ್ಟಲ್‌ದಲ್ಲಿ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಅರ್ಹ ಎಲ್ಲಾ ವಿದ್ಯಾರ್ಥಿಗಳು ಅವಶ್ಯಕ ದಾಖಲಾತಿಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣ ಸಂಖ್ಯೆ ೦೮೪೭೨-೨೪೭೨೬೦ಗೆ ಸಂಪರ್ಕಿಸಲು ಕೋರಲಾಗಿದೆ.

Latest Indian news

Popular Stories