ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೀದರ ಜೂನ-10 (ಕರ್ನಾಟಕ ವಾರ್ತೆ): ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ ಅರೆ ಅಲೆಮಾರಿ ವಿದ್ಯಾರ್ಥಿಗಳು
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಜೂನ-20 ರವರೆಗೆ ಅವಧಿ ವಿಸ್ತರಿಸಲಾಗಿದೆ. (ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ)
ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಜೂನ-7ರವರೆಗೆ ರಾಜ್ಯಾದ್ಯಂತ ಲಾಕ್ಡೌನ್ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಸಿಸುವುದರಿಂದ ವಿದ್ಯಾರ್ಥಿಗಳು ಇ-ಅಟಷ್ಟೇಷನ್ ಮಾಡಿಸುವುದು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿರುತ್ತದೆ.
ಅರ್ಹ ವಿದ್ಯಾರ್ಥಿಗಳು www.ssp.postmatric.karanataka.gov.in ವೆಬ್ ಸೈಟ್ನಲ್ಲಿ ಜೂನ-20 ರವರೆಗೆ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು, ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಮಾಹಿತಿಗಾಗಿ www.bcwd.karanataka.gov.in ಗೆ ಭೇಟಿ ನೀಡಿ. ಇಲಾಖಾ ಸಹಾಯವಾಣಿ ಸಂಖ್ಯೆ 8050770005/ 8050770004 ಹಾಗೂ ಮೇಲ್ [email protected] ಅಥವಾ ರಾಜ್ಯ ವಿದ್ಯಾಥಿವೇತನ ತಂತ್ರಾAಶದ ಸಹಾಯವಾಣಿ ಇಮೇಲ್ [email protected] ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಛೇರಿ ದೂರವಾಣಿ ಸಂಖ್ಯೆ 080-35254757 ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories

error: Content is protected !!