ಶಿವಮೊಗ್ಗ: ಕೃಷಿ, ತೋಟಗಾರಿಕೆ ವಿವಿ ಉದ್ಘಾಟಿಸಿದ ಸಿಎಂ

ಬೆ0ಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು.
ಈ ನೂತನ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಈ ವಿಶ್ವವಿದ್ಯಾಲಯವು ಸಿಎಂ ಬಿ.ಎಸ್ ಯಡಿಯೂರಪ್ಪನವರ ಕನಸಿನ ಕೂಸಾಗಿದೆ ಎಂದರು. ಶಿವಮೊಗ್ಗ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪನವರು ಈ ವಿಶ್ವವಿದ್ಯಾಲಯವನ್ನು 2013 ರಲ್ಲಿ ಹುಟ್ಟು ಹಾಕಿದ್ದರು. ಇದೀಗ ಅವರೇ ಉದ್ಘಾಟಿಸಿದ್ದಾರೆ. ನೂತನ ವಿಶ್ವವಿದ್ಯಾಲಯದ ಆವರಣವನ್ನು ಸಾಗರ ತಾಲ್ಲೂಕಿನ ಇರುವಕ್ಕಿಯಲ್ಲಿ ಉದ್ಘಾಟನೆ ಮಾಡುತ್ತಿರುವುದು ರಾಜ್ಯದ ಅದರಲ್ಲಿಯೂ ವಿಶೇಷವಾಗಿ ಮಲೆನಾಡಿನ ರೈತರಿಗೆ ಒಂದು ವರದಾನವಾಗಲಿದೆ ಎಂದರು.
ಈ ವಿಶ್ವವಿದ್ಯಾಲಯಕ್ಕೆ 787 ಎಕರೆ ಜಮೀನನ್ನು ನೀಡಿ 155 ಕೋಟಿ ರೂ.ಗಳನ್ನು ಮಂಜೂರು ಮಾಡಿ ಇರುವ ನೂತನ ಆವರಣ ಅಭಿವೃದ್ಧಿಗೆ ಸರ್ಕಾರವು ಆದೇಶ ಹೊರಡಿಸಿತ್ತು.ಇದರ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಶಿವಮೊಗ್ಗ , ಚಿಕ್ಕಮಗಳೂರು , ದಾವಣಗೆರೆ , ಚಿತ್ರದುರ್ಗ , ಉಡುಪಿ , ಕೊಡಗು ಮತ್ತು ಮಂಗಳೂರು ಸೇರಿ ಒಟ್ಟು 7 ಜಿಲ್ಲೆಗಳು ಸೇರುತ್ತವೆ . ಸರ್ಕಾರದ ಆದೇಶದಂತೆ ಇರುವ ಆವರಣದಲ್ಲಿ 4 ಲಕ್ಷ 95 ಸಾವಿರ ಚದುರ ಅಡಿ ಪ್ರದೇಶದಲ್ಲಿ ಆಡಳಿತ ಭವನ , ಬೆಳೆ ಉತ್ಪಾದನೆ ಮತ್ತು ಬೆಳೆ ಸಂರಕ್ಷಣಾ ವಿಭಾಗ , ಬೆಳೆ ಅಭಿವೃದ್ಧಿ ಮತ್ತು ಜೈವಿಕ ತಂತ್ರಜ್ಞಾನ ವಿಭಾಗ , ಸಮಾಜ ಮತ್ತು ಮೂಲ ವಿಜ್ಞಾನಗಳ ವಿಭಾಗ, ತೋಟಗಾರಿಕೆ ಮತ್ತು ಅರಣ್ಯ ವಿಭಾಗ, ಗ್ರಂಥಾಲಯ , ಕೊಳಚೆ ನೀರು ಶುದ್ದೀಕರಣ ಘಟಕ ಹಾಗೂ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ನಿಲಯಗಳನ್ನು ನೂತನವಾಗಿ ನಿರ್ಮಿಸಲಾಗಿದೆ . ಇದೊಂದು ಸಮಗ್ರ ಕೃಷಿ ವಿಶ್ವವಿದ್ಯಾಲಯವಾಗಿದ್ದು , ಇಲ್ಲಿ ಹಂತ ಹಂತವಾಗಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೃಷಿ , ತೋಟಗಾರಿಕೆ ಹಾಗೂ ಅರಣ್ಯ ವಿಭಾಗಗಳಲ್ಲಿ ಸ್ನಾತಕ , ಸ್ನಾತಕೋತ್ತರ ಮತ್ತು ಪಿ.ಹೆಚ್.ಡಿ. ಪದವಿಗಳನ್ನು ನೀಡಲು ಮೂಲ ಸಂಪನ್ಮೂಲಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ವಿಶ್ವವಿದ್ಯಾಲಯದ ಅಡಿಯಲ್ಲಿ 4 ಪದವಿ ಕಾಲೇಜುಗಳು , 2 ಡಿಪ್ಲೊಮೋ ಕಾಲೇಜುಗಳು , 13 ಸಂಶೋಧನಾ ಕೇಂದ್ರಗಳು , 4 ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ 2 ವಿಸ್ತರಣಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ.

Latest Indian news

Popular Stories

error: Content is protected !!