ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ 14331 ವಿದ್ಯಾರ್ಥಿಗಳು: 51 ಕೇಂದ್ರಗಳು

ಉಡುಪಿ : ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಶಿಸುತಿ ಹಾಗೂ ಸಮನ್ವಯದೊಂದಿಗೆ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಪರೀಕ್ಷಾ ಪವಿತ್ರ್ಯತೆಯನ್ನು ಕಾಪಾಡಿಕೊಂಡು ಪರೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಮತಾ ಜಿ.ಎಸ್ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿತಿದ್ದರು.
ಜಿಲ್ಲೆಯಲ್ಲಿ ಹೊಸದಾಗಿ 13454, 233 ಖಾಸಗಿ ಅಭ್ಯರ್ಥಿಗಳು, 578 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 65 ರೆಗ್ಯೂಲರ್ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 7471 ಗಂಡು ಮಕ್ಕಳು ಹಾಗೂ 7860 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 14331 ವಿಧ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಉಡುಪಿಯಲ್ಲಿ 15, ಬ್ರಹ್ಮಾವರದಲ್ಲಿ 11, ಕಾರ್ಕಳದಲ್ಲಿ 9, ಬೈಂದೂರು ಮತುತಿ ಕುಂದಾಪುರದಲ್ಲಿ ತಲಾ 8 ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಯನ್ನು ತಪ್ಪದೇ ಅಳವಡಿಸಬೇಕು ಎಂದ ಅವರು, 51 ಪರೀಕ್ಷಾ ಕೇಂದ್ರಗಳಲ್ಲಿ 652 ಕೊಠಡಿ ಮೇಲ್ವಿಚಾರಕರು, 51 ಸ್ಥಾನಿಕ ಜಾಗೃತಿ ದಳದ ಅಧಿಕಾರಿಗಳು ಹಾಗೂ 51 ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ಈಗಾಗಲೇ ನೇಮಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್‌ವಾಚ್‌ಗಳನ್ನು ತರುವುದನ್ನು ನಿಬರ್ಂಧಿಸಲಾಗಿದೆ ಎಂದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಗಡಿಯಾರಗಳನ್ನು ಅಳವಡಿಸಬೇಕೆಂದು ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳಾಗದಂತೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದ ಅವರು, ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕತಿ ಸಮಯಕ್ಕೆ ಆಗಮಿಸಲು ಬಸ್ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಪರೀಕ್ಷಾ ಕೇಂದ್ರದ ಸುತತಿಲೂ 100 ಮೀ. ವ್ಯಾಪಿತಿಯಲ್ಲಿ ನ್ಠಿ956ಷೇಧಾಜ್ಞೆ ಜಾರಿಯಲ್ಲಿರುತತಿದೆ. ಕೇಂದ್ರದ ಸುತತಿಮುತತಿಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಲಾಗುವುದು ಎಂದರು.

ಸಭೆಯಲ್ಲಿ ಎಸ್‌ಪಿ ಡಾ. ಸಿದ್ಧಲಿಂಗಪ್ಪ, ಎಸ್.ಎಸ್.ಎಲ್.ಸಿ ನೋಡೆಲ್ ಅಧಿಕಾರಿ ಮಂಗಳೂರು ಸಿ.ಟಿ.ಇ ಪ್ರಾಂಶುಪಾಲ ಸಿಂಪ್ರಿನ್ ಮಂಥರೋ, ಜಿಲ್ಲಾ ಖಜಾನಾಧಿಕಾರಿ ರಂಗಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಹಾಗೂ ಮತಿತಿತರರು ಉಪಸ್ಥಿತರಿದ್ದರು.

Latest Indian news

Popular Stories