ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಜುಲೈ 19 ಹಾಗೂ 22 ರಂದು ಪರೀಕ್ಷೆ ನಡೆಯುವುದು ನಿಶ್ಚಿತವಾಗಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಯಿತು. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ 1.48ಕ್ಕೆ ಇಳಿಕೆ ಕಂಡಿದೆ. ಕೋವಿಡ್ 2ನೇ ಅಲೆಯು ಕಡಿಮೆಗೊಂಡಿದೆ. ಹೀಗಾಗಿ ಕೊರೋನಾ ಸೋಂಕಿನ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ, ನಿಗದಿ ಪಡಿಸಿರುವಂತೆಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ಸರಕಾರ ಮಾಹಿತಿ ನೀಡಿತು.
ಜುಲೈ 19 ಹಾಗೂ 22ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುತ್ತದೆ. ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ಬಹು ಆಯ್ಕೆ ಮಾದರಿಯಂತೆ ಎರಡು ದಿನ ಪರೀಕ್ಷೆ ನಡೆಸಲಾಗುತ್ತಿದೆ. ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಗೊಂಡಿರುವ ಕಾರಣದಿಂದಾಗಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ಸರಕಾರ ತಿಳಿಸಿತು.
ಈ ಎಲ್ಲಾ ಮಾಹಿತಿಯನ್ನು ಆಲಿಸಿದÀ ಹೈಕೋರ್ಟ್ ನ್ಯಾಯಮೂರ್ತಿ ನಾಗರತ್ನ ಹಾಗೂ ನ್ಯಾಯಮೂರ್ತಿ ಸಂಜೀವ್ ಕುಮಾರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ಒತ್ತಾಯದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಬಾರದು. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪರೀಕ್ಷೆ ನಡೆಸುವುದು ಸೂಕ್ತ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಾಜ್ಯ ಸರ್ಕಾರ ರೂಪಿಸಿರುವಂತ ಎಸ್ ಓಪಿ ಕ್ರಮಗಳನ್ನು ಪಾಲಿಸಬೇಕು ಎಂದು ಅಭಿಪ್ರಾಯಪಟ್ಟಿತ್ತು.
ಪರೀಕ್ಷೆ ಸಂಬAಧ ಸಲ್ಲಿಕೆಯಾಗಿದ್ದಂತ ಪಿಐಎಲ್ ಅರ್ಜಿಯನ್ನು ವಜಾಗೊಳಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.

Latest Indian news

Popular Stories

error: Content is protected !!