ಸಿಬಿಎಸ್‌ಇ 12 ತರಗತಿ ಪರೀಕ್ಷೆ ನಡೆಯಲಿದೆಯಾ?

ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆಗಳು, ಜೆಇಇ, ನೀಟ್ ಮತ್ತು ಇತರ ಪ್ರವೇಶ ಪರೀಕ್ಷೆಗಳನ್ನು ನಡೆಸಬೇಕಾ ಅಥವಾ ಬೇಡವಾ ಎಂಬ ಬಗ್ಗೆ ಚರ್ಚಿಸಲು ವಿಶೇಷ ಸಭೆ ನಡೆಯುತ್ತಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯಗಳ ಶಿಕ್ಷಣ ಸಚಿವರೊಂದಿಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸುತ್ತಿದ್ದಾರೆ.

ಇಂದಿನ ಸಭೆಯಲ್ಲಿ ನೀಟ್ ಮತ್ತು ಜೆಇಇ ಪರೀಕ್ಷೆಗಳ ಬಗ್ಗೆ ಕೂಡಾ ಚರ್ಚೆ ನಡೆಯುತ್ತಿದೆ.
ಛತ್ತೀಸಗಡದಲ್ಲಿ ಜೂನ್ ಒಂದರಿಂದ ಮನೆಯಲ್ಲಿಯೇ 12 ನೇ ತರಗತಿಯ ಪರೀಕ್ಷೆ ನಡೆಯಲಿದೆ.

ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತೆಗೆಯಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.
ಜೂನ್ ಒಂದರಂದು ವೇಳಾಪಟ್ಟಿ ಸಿಬಿಎಸ್‌ಇ ಬಿಡುಗಡೆ ಮಾಡಲಿದೆ.
4 ಪ್ರಮುಖ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸಲು ಸಿಬಿ ಎಸ್ ಇ ಚಿಂತನೆ ನಡೆಸಿದೆ.

ಪರೀಕ್ಷೆಗಳನ್ನು ರದ್ದುಗೊಳಿಸಿ ಎಂದು ಈಗಾಗಲೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.

ಪರೀಕ್ಷೆಗೂ ಮುನ್ನ ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿ ಎಂದು ದೆಹಲಿ ಸರ್ಕಾರದ ಉಪಮುಖ್ಯಮಂತ್ರಿ ಆಗಿರುವ ಮನೀಶ್ ಸಿಸೋಡಿಯಾ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Latest Indian news

Popular Stories

error: Content is protected !!