ಕರ್ನಾಟಕ ಸರಕಾರ ಕಾಲೇಜು ಶಿಕ್ಷಣ ಇಲಾಖೆ

ವರದಿ
ಕರ್ನಾಟಕ ಸರಕಾರ ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿಯ ರಾಷ್ಟಿçÃಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್, ಅಂತರೀಕ ಗುಣ ಮಟ್ಟ ಭರವಸೆ ಕೋಶ,ಯುತ್ ರೆಡ್ ಕ್ರಾಸ್ ಘಟಕ, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಏಡ್ಸ್ ನಿಯಂತ್ರಣ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ ೧೨ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ ೧೫೮ನೇಯ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತ್ತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಚಿತ್ರಾ.ವೈರವರು ದೀಪ ಬೆಳಗಿಸಿ, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕರ‍್ಯಕ್ರಮವನ್ನು ಉದ್ಘಾಟಿಸಿದರು. ಎಲ್ಲಾ ವಿದ್ಯಾರ್ಥಿಗಳು ಜೀವನದಲ್ಲಿ ಒಳ್ಳೆಯ ಗುರಿ ಉದ್ದೇಶಗನ್ನು ಉಟ್ಟುಕೊಳ್ಳಬೇಕು ಮತ್ತು ಅದನ್ನು ಸಾಧಿಸುವ ಪ್ರಯತ್ನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕರ‍್ಯಕ್ರಮದ ಬಗ್ಗೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾಧಿಕಾರಿ ಡಾ ದಯಾನಂದ.ಕೆ.ಸಿಯವರು ತಮ್ಮ ಪ್ರಸ್ತಾವಿಕ ಮಾತುಗಳಲ್ಲಿ ಪ್ರತಿಯೊಬ್ಬರು ಸ್ವಾಮಿ ವಿವೇಕಾನಂದರ ಜೀವನ ಮೌಲ್ಯಗಳನ್ನು, ಆದರ್ಶಗಳನ್ನು ತಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು. ಮುಖ್ಯ ಭಾಷಣಕಾರರಾದ ಶ್ರೀಕಾವೇರಿ ಪದವಿ ಪೂರ್ವ ಕಾಲೇಜು, ಭಾಗಮಂಡಲದ ಉಪನ್ಯಾಸಕರಾದ ಕೆ.ಜಿ.ದಿವಾಕರರವರು ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಅಮೋಘವಾದ ಸುಪ್ತ ಪ್ರತಿಭೆಯಿದೆ. ತಮ್ಮ ಜೀವನದಲ್ಲಿ ಒಳ್ಳೆಯ ಗುರಿ ಉದ್ದೇಶಗಳನ್ನು ಇಟ್ಟುಕೊಂಡು, ಗುರಿ ಉದೇಶದ ಇಡೇರಿಕೆಗೆ ಪ್ರಯತ್ನ ಪಡಬೇಕು.ಸ್ವಾಮಿ ವಿವೇಕಾನಂದರ ಜೀವನ ಸಾಧನೆ ಮತ್ತು ಜೀವನ ಮೌಲ್ಯಗಳನ್ನು ಹಲವಾರು ದೃಷಾಂತಗಳ ಮೂಲಕ ವಿದ್ಯಾರ್ಥಿಗಳಿಗೆ ವಿವರಿಸಿದರು.
ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆನಂದರವರು ಯುವ ಜನತೆ ಮತ್ತು ಹೆಚ್.ಐ.ವಿ.ಏಡ್ಸ್ ವಿಷಯದ ಬಗ್ಗೆ ಉಪನ್ಯಾಸ ಮಾಡಿದರು. ಹೆಚ್.ಐ.ವಿ.ಏಡ್ಸ್ ಹರಡಲು ಕಾರಣ ಮತ್ತು ಅದರ ಪರಿಣಾಮವನ್ನು ವಿವರಿಸಿದರು. ಅಲ್ಲದೆ ಇಂದು ಯುವ ಜನತೆ ಹೆಚ್ಚಾಗಿ ಇದಕ್ಕೆ ಬಲಿಯಾಗುತ್ತಾರೆ.ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಜೀವವನ್ನು ಹಾಳು ಮಾಡಿಕೊಳ್ಳಬಾರದೆಂದು ವಿವರಿಸಿದರು.ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಳ್ವಿಚಾರಕರಾದ ಶ್ರೀಮತಿ ಸುನೀತಾ ಮುತ್ತಣ್ಣರವರು ತಮ್ಮ ಬಾಷಣದಲ್ಲಿ ಹೆಚ್.ಐ.ವಿ.ಏಡ್ಸ್ಗೆ ಹೆಚ್ಚಾಗಿ ಯುವಜನತೆ ಬಲಿಯಾಗುತ್ತಿದ್ದಾರೆ. ಅದರಲ್ಲೂ ವಿದ್ಯಾರ್ಥಿಗಳು ತಮ್ಮ ಕೆಟ್ಟ ಸ್ನೇಹಿತರ ಸಹವಾಸದಿಂದಾಗಿ ತಮ್ಮ ಅಮೂಲ್ಯವಾದ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳು ಎಚ್ಚರದಿಂದ ಇರಲು ವಿದ್ಯಾರ್ಥಿಗಳಿಗೆ ವಿವರಿಸಿದರು.
ಕರ‍್ಯಕ್ರಮದ ವೇದಿಕೆಯಲ್ಲಿ ಕಾಲೇಜಿನ ಅಂತರೀಕ ಗುಣ ಮಟ್ಟ ಭರವಸೆ ಕೋಶದ ಸಂಚಾಲಕರಾದ ಶ್ರೀಮತಿ ಮುತ್ತಮ್ಮ ಕೆ.ಕೆ ಉಪಸ್ಥಿತರಿದ್ದರು.ಕರ‍್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ತೃತೀಯ ಪದವಿ ವಿದ್ಯಾರ್ಥಿ ಕು ಕಾವ್ಯ.ಹೆಚ್.ಆರ್ ಕರ‍್ಯಕ್ರಮದ ನಿರ್ವಹಣೆಯನ್ನು, ಕು ವಿದ್ಯಾಶ್ರೀ ಸ್ವಾಗತಿಸಿದರು ಮತ್ತು ಕುಮಾರಿ ಶಾಲಿನಿ ವಂದಿಸಿದರು.

Latest Indian news

Popular Stories