ಅರುಣಾಚಲ ಪ್ರದೇಶ, ಸಿಕ್ಕಿಂ ವಿಧಾನಸಭೆ ಚುನಾವಣೆ ಫಲಿತಾಂಶ: 50ರ ಗಡಿ ದಾಟಿದ ಬಿಜೆಪಿ, ಸಿಕ್ಕಿಂನಲ್ಲಿ ಕ್ರಾಂತಿಕಾರಿ ಮೋರ್ಚಾ ಮುಂಚೂಣಿ!

ಅರುಣಾಚಲ ಪ್ರದೇಶ: ತಿಂಗಳುಗಟ್ಟಲೆ ಪ್ರಚಾರ, ಮತದಾನ ಪ್ರಕ್ರಿಯೆ ನಂತರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಫಲಿತಾಂಶ ತಿಳಿಯುವ ಸಮಯ ಬಂದಿದೆ.

ಅರುಣಾಚಲ ಪ್ರದೇಶದ 50 ಮತ್ತು ಸಿಕ್ಕಿಂನ 32 ವಿಧಾನಸಭಾ ಸ್ಥಾನಗಳಿಗೆ ಮತ ಎಣಿಕೆ ಇಂದು ಭಾನುವಾರ ನಡೆಯುತ್ತಿದೆ. ಅರುಣಾಚಲದಲ್ಲಿ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, 60 ವಿಧಾನಸಭಾ ಸ್ಥಾನಗಳ ಪೈಕಿ 50 ಸ್ಥಾನಗಳ ಫಲಿತಾಂಶ ಇಂದು ತಿಳಿಯಲಿದೆ. ಸಿಕ್ಕಿಂನಲ್ಲಿ, ಅಧಿಕಾರದಲ್ಲಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) ಎರಡನೇ ಅವಧಿಗೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ.

ಅರುಣಾಚಲ ಪ್ರದೇಶದಲ್ಲಿ 10 ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ಮತ್ತು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಇದೀಗ ಗೆಲುವಿಗೆ ಅರ್ಧದ ಗಡಿ ದಾಟಿದೆ. ಬಿಜೆಪಿಯ ಮಿತ್ರಪಕ್ಷ ಕಾನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮತ್ತು ಎನ್‌ಸಿಪಿ ತಲಾ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.

ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭಿಕ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಅರ್ಧದ ಗಡಿ ದಾಟಿದ್ದು, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಲು ಸಜ್ಜಾಗಿದ್ದಾರೆ. ಏಪ್ರಿಲ್ 19 ರಂದು ನಡೆದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ದಿನವೇ ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದವು.

ಅವಿರೋಧವಾಗಿ ಆಯ್ಕೆಯಾದ 10 ಬಿಜೆಪಿ ಶಾಸಕರಲ್ಲಿ ಮುಕ್ತೋದಿಂದ ಮುಖ್ಯಮಂತ್ರಿ ಪೆಮಾ ಖಂಡು, ಚೌಕಮ್‌ನಿಂದ ಉಪಮುಖ್ಯಮಂತ್ರಿ ಚೌನಾ ಮೇ, ಇಟಾನಗರದಿಂದ ಟೆಚಿ ಕಾಸೊ, ತಾಲಿಹಾದಿಂದ ನ್ಯಾತೋ ದುಕಾಮ್ ಮತ್ತು ರೋಯಿಂಗ್‌ನಿಂದ ಮುಚು ಮಿಥಿ ಸೇರಿದ್ದಾರೆ.

ಇನ್ನು ಸಿಕ್ಕಿಂನಲ್ಲಿ ಅಧಿಕಾರದಲ್ಲಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 50 ಸ್ಥಾನಗಳನ್ನು ದಾಟಿದ್ದು, 32 ಸ್ಥಾನಗಳ ಪೈಕಿ 27ರಲ್ಲಿ ಮುನ್ನಡೆ ಸಾಧಿಸಿದೆ. ಪ್ರತಿಪಕ್ಷ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಸಿಕ್ಕಿಂನ 32 ಸ್ಥಾನಗಳಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಸಂಭ್ರಮಾಚರಣೆಗಳು ಆರಂಭವಾಗಿವೆ.

Latest Indian news

Popular Stories