Election

ಮೈಸೂರಿನಲ್ಲಿಯೇ ನಿರ್ಮಾಣವಾಗಲಿದೆ ಚಿತ್ರನಗರಿ

ಮೈಸೂರು: ಮೈಸೂರಿನಲ್ಲಿಯೇ ಚಿತ್ರನಗರಿ ನಿರ್ಮಿಸಲು ತೀರ್ಮಾನಿಸಿರುವುದು ಸಂತಸದ ಸಂಗತಿ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಸಿನಿಮಾ ಉದ್ಯಮ ವ್ಯಾಪಕವಾಗಿ ಬೆಳೆದಿದ್ದರೂ ಸಹ ರಾಜ್ಯದಲ್ಲಿ ಈವರೆಗೆ ಯಾವುದೇ ಚಿತ್ರನಗರಿ ನಿರ್ಮಾಣವಾಗಿಲ್ಲ. ಈ ಕೊರತೆಯನ್ನು ಮನಗಂಡು ಮೈಸೂರಿನಿಂದ ಸುಮಾರು 20 ಕಿ.ಮೀ. ದೂರದ ಹಿಮ್ಮಾವು ಸಮೀಪ 110 ಎಕರೆ ಜಾಗದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಯೋಜನೆಯನ್ನು ಕಾರ್ಯಗತಗೊಳಿಸಲು ಕೆ.ಐ.ಎ.ಡಿ.ಬಿ. ವತಿಯಿಂದ ಜಮೀನುಗಳನ್ನು ಸಹ ಗುರುತಿಸಲಾಗಿದೆ.
ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಸಿನಿಮಾ ರಂಗಕ್ಕೆ ಹಾಗೂ ಸ್ಥಳೀಯವಾಗಿ ಹಲವಾರು ಅನುಕೂಲಗಳಿವೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಸೆಳೆಯಲು, ಕನ್ನಡ ಚಿತ್ರೋದ್ಯಮ ಅಭಿವೃದ್ಧಿಗೆ ಹಾಗೂ ಉದ್ಯೋಗ ಸೃಷ್ಟಿಸಲು ಚಿತ್ರನಗರಿ ನೆರವಾಗಲಿದೆ ಎಂದಿದ್ದಾರೆ.
ಮೈಸೂರು ಸುತ್ತಮುತ್ತ ನೂರಕ್ಕೂ ಹೆಚ್ಚು ತಾಣಗಳಲ್ಲಿ ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಹಲವು ಭಾಷೆಗಳ ನೂರಾರು ಸಿನಿಮಾಗಳ ಚಿತ್ರೀಕರಣ ನಡೆದಿದೆ. ಮೈಸೂರು ಅರಮನೆ, ಲಲಿತಮಹಲ್ ಹೋಟೆಲï, ಚಾಮುಂಡಿಬೆಟ್ಟ, ನಂಜನಗೂಡು ಶ್ರೀ ನಂಜುAಡೇಶ್ವರ ದೇವಸ್ಥಾನ, ಮೃಗಾಲಯ, ಮೈಸೂರು ವಿಶ್ವವಿದ್ಯಾಲಯ, ಬಲಮುರಿ, ಎಡಮುರಿ, ಕೆಆರ್‌ಎಸ್, ತಲಕಾಡು, ಸೋಮನಾಥಪುರ, ಶಿವನಸಮುದ್ರ, ಶ್ರೀರಂಗಪಟ್ಟಣ, ಕುಕ್ಕರಹಳ್ಳಿ ಕೆರೆಯಂಥ ಅತ್ಯುತ್ತಮ ತಾಣಗಳು ಈ ಭಾಗದಲ್ಲಿವೆ.
ಹೆಚ್ಚು ಚಿತ್ರೀಕರಣ ನಡೆಯುವ ಕಾರಣ ಮೈಸೂರು ಭಾಗದಲ್ಲಿ ಚಿತ್ರನಗರಿ ನಿರ್ಮಿಸಬೇಕೆಂಬುದು ಕನ್ನಡ ಸಿನಿಮಾ ನಿರ್ಮಾಪಕರ ಬಹುಕಾಲದ ಒಲವು ಹಾಗೂ ಒತ್ತಾಯ ಕೂಡ ಆಗಿದೆ.
ಸಂಚಾರ ದಟ್ಟಣೆ ಮುಕ್ತ ರಸ್ತೆಗಳು, ರಾಜಪರಂಪರೆ ಹೊಂದಿರುವ ಮೈಸೂರಿನ ಅಂಬಾವಿಲಾಸ ಅರಮನೆ ಸೇರಿದಂತೆ ಇತಿಹಾಸ ಪ್ರಸಿದ್ಧ ಸ್ಥಳಗಳು, ಪೌರಾಣಿಕ ಸಿನಿಮಾ ನಿರ್ಮಾಣಕ್ಕೆ ಹೇಳಿ ಮಾಡಿಸಿದ ಸ್ಥಳಗಳಂತಿವೆ. ಮಾತ್ರವಲ್ಲದೆ ಹಳೆ ಮೈಸೂರು ಭಾಗ ಕನ್ನಡ ಚಿತ್ರರಂಗಕ್ಕೆ ತನ್ನದೇ ಆದ ಕೊಡುಗೆ ನೀಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button