ಅಣ್ಣಾಮಲೈ ನಾಮಪತ್ರ ತಡೆಹಿಡಿದ ಚುನಾವಣಾ ಆಯೋಗ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅರವಕುರಚಿ ಕ್ಷೇತ್ರದಿಂದ ಸ್ಪರ್ಧಿಸಿರುವ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಅಭ್ಯರ್ಥಿ ಕೆ.

ಅಣ್ಣಾಮಲೈ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಡೆಹಿಡಿದಿದೆ.


ಅಣ್ಣಾಮಲೈ ಅವರ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿದ್ದರೂ, ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಅವರು ಮಾಹಿತಿ ನೀಡಿಲ್ಲ ಎಂದು ಪಕ್ಷೇತರ ಅಭ್ಯರ್ಥಿ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಹೀಗಾಗಿ ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಅಧಿಕಾರಿಗಳು ಅಣ್ಣಾಮಲೈ ಅವರಿಗೆ ನೋಟಿಸ್ ನೀಡಿ ನಾಮಪತ್ರವನ್ನು ತಡೆ ಹಿಡಿದಿದ್ದಾರೆ ಎನ್ನಲಾಗಿದೆ.


ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಅಣ್ಣಾಮಲೈ ಮಾರ್ಚ್ 18ರಂದು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

Latest Indian news

Popular Stories