ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂರು ಚೆಕ್‌ಪೋಸ್ಟ್ ಸ್ಥಾಪನೆ: ಡಿಸಿ

ಉಡುಪಿ: ಕೊನೆಯ 78ಗಂಟೆಗಳಲ್ಲಿ ಹೆಚ್ಚಿನ ತಪಾಸಣೆ ನಡೆಸಲು ಜಿಲ್ಲೆಯಲ್ಲಿ ಮೂರು ಚೆಕ್‌ಪೋಸ್ಟ್‌ಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದರು.

ಹೊಸದಾಗಿ ಕುಂದಾಪುರ ಕ್ಷೇತ್ರದ ಕಂಡ್ಲೂರು, ಹಾಲಾಡಿ ಹಾಗೂ ಉಡುಪಿ ಕ್ಷೇತ್ರದ ನೇಜಾರಿನಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಹೀಗೆ ಜಿಲ್ಲೆಯಲ್ಲಿ ಒಟ್ಟು 18 ಮತ್ತು ಇಡೀ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 31 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.”

Latest Indian news

Popular Stories