‘ದ್ವೇಷ ಭಾಷಣ’: ಚುನಾವಣಾ ಆಯೋಗ ಸೂಚನೆ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ‌ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಮಂಗಳವಾರ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ ಅವರು, ಧಾರ್ಮಿ ಕ ಭಾವನೆ ಕೆರಳಿಸುವಂತೆ ದ್ವೇಷ ಭಾಷಣ‌ ಮಾಡಿದ್ದು ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ತೇಜಸ್ವಿ ಸೂರ್ಯ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಚಿಕ್ಕಪೇಟೆ ನಿವಾಸಿಯೊಬ್ಬರು ಚುನಾವಣಾಧಿಕಾರಿಗೆ ದೂರು ನೀಡಿದ್ದರು.

ದೂರಿಗೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯಗೆ ನೋಟಿಸ್ ನೀಡಲಾಗುವುದು. ಅಗತ್ಯಬಿದ್ದರೆ ಹೆಚ್ಚಿನ ವಿಚಾರಣೆಗೆ ಕರೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Latest Indian news

Popular Stories