ಕ್ರೀಯಾತ್ಮಕ ಚಟುವಟಿಕೆ ಕೈಗೊಂಡು ಮತದಾನ ಪ್ರಮಾಣ ಹೆಚ್ಚಿಸಿ: ಪಿ.ಎಸ್.ವಸ್ತ್ರದ ಸೂಚನೆ

E 1 Election, Featured Story, State News, Vijayapura
ವಿಜಯಪುರ: ಕಳೆದ ಚುನಾವಣೆಗಳಲ್ಲಿ ಅತಿ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸಿಕೊಂಡು ವಿಭಾಗವಾರು ಆಯ್ಕೆ ಮಾಡಿಕೊಂಡು ಸ್ವೀಪ್ ಸಮಿತಿ ವತಿಯಿಂದ ಕ್ರೀಯಾತ್ಮಕ ಚಟುವಟಿಕೆಗಳನ್ನು ಕೈಗೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ 2023-24ನೇ ಸಾಲಿನ ಸ್ವೀಪ್ ಕಾರ್ಯಚಟುವಟಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಂಬರುವ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಶೇಷ ಚೇತನ ಮತದಾರರು, ತೃತೀಯ ಲಿಂಗ ಮತದಾರರು, ದುರ್ಬಲ ವರ್ಗದ ಮತದಾರರನ್ನು ವಿಶೇಷ ಆಸಕ್ತಿ ವಹಿಸಿ ಸ್ವೀಪ್ ಕಾರ್ಯಚಟುವಟಿಕೆ ಕೈಗೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಮತದಾನ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಮತದಾರರಲ್ಲಿ ಜಾಗೃತಿ ಮೂಡಿಸಿ, ಮತದಾನ ಪ್ರಮಾಣ ಹೆಚ್ಚಿಸಲು ಮುಂಚಿತವಾಗಿಯೇ ಸೂಕ್ತ ಕ್ರೀಯಾಯೋಜನೆ ಸಿದ್ಧಪಡಿಸಿಟ್ಟುಕೊಳ್ಳಬೇಕು. ಮತದಾರರ ಸಾಕ್ಷರತಾ ಸಂಘ, ಚುನಾವಣಾ ಜಾಗೃತಿ ಕ್ಲಬ್ ಕಾರ್ಯಚಟುವಟಿಕೆಯನ್ನು ವಿಸ್ತರಿಸಿಕೊಮಡು ಎಲ್ಲ ಶಾಲಾ,ಕಾಲೇಜ್ಗಳಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಲ್ಲಿ ಚುನಾವಣೆ ಮತ್ತು ಮತದಾನ ಕುರಿತು ಅರಿವು ಮೂಡಿಸಲು ವಿವಿಧ ಶಾಲಾ, ಕಾಲೇಜ್ಗಳಲ್ಲಿ ಸ್ವೀಪ್ ಸಮಿತಿ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ರಾಷ್ಟ್ರೀಯ ಮತದಾರರ ದಿನ ಅಂಗವಾಗಿ (ಎನ್ವಿಡಿ) ಮಾರ್ಗದರ್ಶಿಯಂತೆ ವಿವಿಧ ಪ್ರಬಂಧ ಸ್ಪರ್ಧೆ, ಚುನಾವಣಾ ಸಂಸತ್ತು ಅಣುಕು ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಅವರು ಸೂಚಿಸಿದರು.
ಬರುವ ಚುನಾವಣೆಗೆ ಶೇ.75ಕ್ಕೂ ಹೆಚ್ಚು ಗುರಿ ಸಾಧಿಸಬೇಕು. ಕಡಿಮೆ ಮತದಾನ ಪ್ರಮಾಣದ ಮತಗಟ್ಟೆಗಳನ್ನು ಗುರುತಿಸಿಕೊಂಡು ವಿಭಾಗವಾರು ಆಯ್ಕೆಮಾಡಿಕೊಂಡು ಮತದಾನ ಪ್ರಮಾಣ ಹೆಚ್ಚಳಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮುಂಚಿತವಾಗಿಯೇ ಸ್ವೀಪ್ ಕ್ರೀಯಾ ಯೋಜನೆ ಸಿದ್ದಪಡಿಸಿಕೊಂಡು ಕ್ರೀಯಾಯೋಜನೆಯಂತೆ ಕಾರ್ಯನಿರ್ವಹಿಸಬೇಕು. ಮತಗಟ್ಟೆಗಳಲ್ಲಿರುವ ಮೂಲಭೂತ ಸೌಲಭ್ಯಗಳ ಕುರಿತು ಮತದಾರರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ರಚನೆಯಾಗಿರುವ 900 ಇಎಲ್ಸಿ ಕ್ಲಬ್ಗಳು ಹಾಗೂ 2072 ಚುನಾವಣಾ ಜಾಗೃತಿ ಕ್ಲಬ್ಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಮತದಾರರಲ್ಲಿ ಜಾಗೃತಿ ಮೂಡಿಸುವಲ್ಲಿ ನಿರತರಾಗಬೇಕು,. ಮಹಿಳೆಯರು ಹೆಚ್ಚು ಮತದಾನ ಮಾಡಲು ಪ್ರೇರೆಪಿಸಬೇಕು ಎಂದು ಸೂಚಿಸಿದ ಅವರು ಈ ಹಿಂದೆ ನಡೆದ ಚುನಾವಣೆಗಳಲ್ಲಿ ಸ್ವೀಪ್ ಕಾರ್ಯಚಟುವಟಿಕೆ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಡಯಟ್ ಪ್ರಾಂಶುಪಾಲ ಸಾಯಿರಾಬಾನು ಖಾನ್, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯತ್ ಯೋಜನಾ ವಿಭಾಗದ ಉಪನಿರ್ದೇಶಕ ಎ.ಬಿ.ಅಲ್ಲಾಪುರ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ತಾಲೂಕಾ ತಹಶೀಲ್ದಾರ, ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು, ಜಿಲ್ಲಾ ಮಟ್ಟದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Latest Indian news

Popular Stories