Election

ಹೆಚ್ಚಿದ ಕರೋನಾ ಅಬ್ಬರ, ಒಂದೇ ದಿನ 46,951 ಪ್ರಕರಣ

ಸಾವನ್ನಪ್ಪಿದ್ದು, 46,951 ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 11.6 ಮಿಲಿಯನ್ ಮತ್ತು ಸಾವಿನ ಸಂಖ್ಯೆ 159,967ಕ್ಕೆ ಏರಿಕೆಕಂಡಿದೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,34,646 ಆಗಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಭಾನುವಾರದವರೆಗೆ 23,44,45,774 ಮಾದರಿಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ 880,655 ಮಾದರಿಗಳನ್ನು ಒಂದೇ ದಿನ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಮಹಾರಾಷ್ಟç, ಕೇರಳ, ಪಂಜಾಬ್, ಕರ್ನಾಟಕ, ಗುಜರಾತ್ ಮತ್ತು ಮಧ್ಯಪ್ರದೇಶಗಳಲ್ಲಿ ಶೇ.83.14ರಷ್ಟು ಹೊಸ ಸೋಂಕುಗಳಿವೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಮಹಾರಾಷ್ಟç, ತಮಿಳುನಾಡು, ಪಂಜಾಬ್, ಮಧ್ಯಪ್ರದೇಶ, ದೆಹಲಿ, ಕರ್ನಾಟಕ, ಗುಜರಾತ್ ಮತ್ತು ಹರಿಯಾಣದಲ್ಲಿ ದಿನದಿಂದ ದಿನಕ್ಕೆ ಹೊಸ ಪ್ರಕರಣಗಳು ದಾಖಲಾಗುತ್ತಿವೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button