Election

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಕೆ

ಮಡಿಕೇರಿ ಏ.೫ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸುತ್ತಿರುವ ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಹಾಗೂ ಕೊಡಗು ಜಿಲ್ಲಾ ಲೇಖಕರ ಬಳಗದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿಯಾಗಿರುವ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಮಹೇಶ್ ಅವರಿಗೆ ನಾಮಪತ್ರ ಸಲ್ಲಿಸಿದ ಈರ್ವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಕೆಗೂ ಮೊದಲು ಕೇಶವ ಕಾಮತ್ ಅವರು ರಾಷ್ಟçಕವಿ ಕುವೆಂಪು ಅವರ ಪುತ್ತಳಿಗೆ ಗೌರವ ಅರ್ಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ ನ ರಾಜ್ಯ ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಮೇ ೯ ರಂದು ಚುನಾವಣೆ ನಡೆಯಲಿದೆ. ಫೋಟೋ :: ಕೇಶವ ಕಾಮತ್, ಲೋಕೇಶ್ ಸಾಗರ್

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button