ಲೋಕಸಭಾ ಚುನಾವಣೆ 2024 ನೀತಿ ಸಂಹಿತೆ: ಬೆಂಗಳೂರಿನಲ್ಲಿ ದಾಖಲೆ ಇಲ್ಲದ 20 ಲಕ್ಷ ರೂ ಹಣ ವಶಕ್ಕೆ!

ಬೆಂಗಳೂರು: ಲೋಕಸಭಾ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾದ ಬೆನ್ನಲ್ಲೇ ಬೆಂಗಳೂರಿನಲ್ಲಿ 2 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 20 ಲಕ್ಷ ರೂ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಲೋಕಸಭೆ ಚುನಾವಣೆಗೆ (Lok Sabha Election) ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶದಲ್ಲಿ ನೀತಿ ಸಂಹಿತೆ (Model Code of Conduct) ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು (Election Officers) ಮತ್ತು ಪೊಲೀಸರು ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ.

ಅದರಂತೆ ಬೆಂಗಳೂರಿನಲ್ಲಿ ಮತ್ತು ನೆಲಮಂಗಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂಪಾಯಿಯನ್ನು ಅಶೋಕನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7 ಲಕ್ಷ ರೂಪಾಯಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಜಾಸ್ ಟೋಲ್​ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರೆ, ಮತ್ತೊಂದು ಪ್ರಕರಣದಲ್ಲಿ ಕಾರಿನಲ್ಲಿದ್ದ ತಮಿಳುನಾಡಿನ ಉದ್ಯಮಿ ರಘುಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಘುಪತಿ ಬೆಂಗಳೂರಿನಿಂದ ತುಮಕೂರು ಮಾರ್ಗದಲ್ಲಿ ತೆರಳುತ್ತಿದ್ದರು. ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories