ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಮಹಾತೀರ್ಪಿಗೆ ಮತ ಗಣನೆ ಆರಂಭವಾಗಿದ್ದು. 7 ಹಂತಗಳಲ್ಲಿ ನಡೆದ ಚುನಾವಣೆಯ ಮಹಾ ಫಲಿತಾಂಶಕ್ಕಾಗಿ ಇಡೀ ಜಗತ್ತೇ ಕಾತರದಿಂದ ಕಾಯುತ್ತಿದೆ.
ಏಪ್ರಿಲ್ 19ರಿಂದ ಆರಂಭವಾಗಿದ್ದ ಲೋಕಸಭೆ ಚುನಾವಣೆಯ ಮತದಾನ ಜೂನ್ 1ರವರೆಗೂ ನಡೆದಿತ್ತು. ಹೀಗಾಗಿ ಸುದೀರ್ಘವಾಗಿ ನಡೆದ ಚುನಾವಣಾ ಪ್ರಕ್ರಿಯೆ ಎಂಬ ದಾಖಲೆಯನ್ನೂ ಬರೆದಿದೆ. ಹಲವು ಅಡೆತಡೆಗಳು, ಸಾಕಷ್ಟು ಸವಾಲುಗಳ ಮಧ್ಯೆ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿ ಚುನಾವಣಾ ಪ್ರಕ್ರಿಯೆ ಮುಗಿಸಿತ್ತು. ಆದರೆ, ಇಂದು ನಡೆಯುವ ಮತ ಎಣಿಕೆಯೊಂದಿಗೆ ಈ ಎಲ್ಲಾ ಪ್ರಕ್ರಿಯೆಗಳೂ ಮುಕ್ತಾಯ ಕಾಣಲಿವೆ.