
ElectionFeatured Story
ಕರ್ನಾಟಕದಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಶೇ.9.45ರಷ್ಟು ಮತದಾನ
ಕರ್ನಾಟಕದಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಶೇ.9.45ರಷ್ಟು ಮತದಾನವಾಗಿದೆ.
2024ನೇ ಸಾಲಿನ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ಪ್ರಕ್ರಿಯೆ ಪ್ರಗತಿಯಲ್ಲಿ ಸಾಗಿದೆ. ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಬಳ್ಳಾರಿಯಲ್ಲಿ ಬಿರು ಬಿಸಿಲು ಹಿನ್ನೆಲೆ ಬೆಳಗ್ಗೆಯಿಂದಲೇ ಮತಗಟ್ಟೆ ಕೇಂದ್ರಗಳಿಗೆ ವೃದ್ಧರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಸರದಿ ಸಾಲಿನಲ್ಲಿ ನಿಂತು ಮತದಾನ ಚಲಾಯಿಸಿದರು. ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8ವಿಧಾನಸಭಾ ಕ್ಷೇತ್ರಗಳಲ್ಲಿಒಟ್ಟು 1972ಮತಗಟ್ಟೆಗಳಿದ್ದು, ಈ ಪೈಕಿ ಬಳ್ಳಾರಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿಒಟ್ಟು 1219ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.




