ಲೋಕಸಭಾ ಚುನಾವಣೆ: ಜಿಲ್ಲೆಯಲ್ಲಿ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ


ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಇಂದು ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾಗಿ ಶಬರೀಶ್ ಆರ್ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಎಲ್ ರಂಗನಾಥ್ ಗೌಡ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.

ನೀತಿ ಸಂಹಿತೆ ಉಲ್ಲಂಘನೆ : ಮದ್ಯ ವಶ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 31 ರಂದು ಅಬಕಾರಿ ಇಲಾಖೆ ವತಿಯಿಂದ 10,680 ರೂ. ಮೌಲ್ಯದ 24.030 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Latest Indian news

Popular Stories