ಪಂಜಾಬ್ ಚುನಾವಣೆ: ಎಲ್ಲ 117 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

ಚಂಡೀಗಢ: 2022ರ ಪಂಜಾಬ್ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 117 ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ತಿಳಿಸಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿಯ ಪಂಜಾಬ್ ಘಟಕದ ಸಭೆಯಲ್ಲಿ ಭಾಗವಹಿಸಿದ ಸಂತೋಷ್ ಪಕ್ಷದ ರಾಜ್ಯ ನಾಯಕರು ಮತ್ತು ಇತರರೊಂದಿಗೆ ಪಂಜಾಬ್ ರಾಜಕೀಯದ ಬಗ್ಗೆ ವಿವರವಾದ ಚರ್ಚೆ ನಡೆಸಿದರು.
ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ತೆಗೆದುಹಾಕಲು ಇಡೀ ಪ್ರತಿಪಕ್ಷಗಳು ಎಲ್ಲ ತಂತ್ರಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.
ಕೃಷಿ ಕಾನೂನುಗಳು ಸಮೃದ್ಧಿಯನ್ನು ತರುತ್ತವೆ ಎಂದು ರೈತರು ಅರಿತುಕೊಂಡಿದ್ದರಿAದ ಇದರ ವಿರುದ್ಧದ ಸುಳ್ಳು ಪ್ರಚಾರ ಶೀಘ್ರದಲ್ಲೇ ಕುಸಿಯಲಿದೆ ಎಂದು ಸಂತೋಷ್ ವಿಶ್ವಾಸ ವ್ಯಕ್ತಪಡಿಸಿದರು.
ಮೋದಿ ಯಾವಾಗಲೂ ರೈತರ ಪರವಾಗಿದ್ದಾರೆ. ಕೃಷಿ ಕ್ಷೇತ್ರದ ಹಿತಾಸಕ್ತಿಗಳು ಅವರಿಗೆ ಮತ್ತು ಅವರ ಸರ್ಕಾರಕ್ಕೆ ಪ್ರಮುಖವಾಗಿವೆ ಎಂದು ಸಂತೋಷ್ ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್, ಪಂಜಾಬ್ ಬಿಜೆಪಿ ಮುಖ್ಯಸ್ಥ ಅಶ್ವನಿ ಶರ್ಮಾ ಮತ್ತು ಇತರ ನಾಯಕರು ಉಪಸ್ಥಿತರಿದ್ದರು

Latest Indian news

Popular Stories

error: Content is protected !!