ಏಪ್ರಿಲ್ 26ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಸಂಪೂರ್ಣ ವಿವರ

ಏಪ್ರಿಲ್ 26, ಶುಕ್ರವಾರದಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿದೆ. ಶಾಲಾ ಕಾಲೇಜು ಹಾಗೂ ಇತರ ಶಿಕ್ಷಣ ಸಂಸ್ಥೆಗಳಿಗೂ ರಜೆ ಇದೆ. ಬಸ್, ರೈಲು ಇತ್ಯಾದಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಖಾಸಗಿ ಕಂಪನಿಗಳಿಗೆ ಕಡ್ಡಾಯ ರಜೆ ಇಲ್ಲ. ಆದರೆ, ಮತದಾನಕ್ಕೆ ಅರ್ಹ ಇರುವ ಉದ್ಯೋಗಿಗೆ ಮತದಾನಕ್ಕೆ ಅನುಕೂಲ ಮಾಡಿಕೊಡಬೇಕಾಗುತ್ತದೆ.

ಏಪ್ರಿಲ್ 26ರಂದು ಕರ್ನಾಟಕದಲ್ಲಿ ಯಾವುದಕ್ಕೆ ರಜೆ?
ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಏಪ್ರಿಲ್ 26, ಶುಕ್ರವಾರ ರಜೆ ಇರುತ್ತದೆ.
ಬ್ಯಾಂಕುಗಳಿಗೆ ರಜೆ
ಶಾಲೆ, ಕಾಲೇಜುಗಳಿಗೆ ರಜೆ
ಹೈಕೋರ್ಟ್ ನ್ಯಾಯಪೀಠಗಳಿಗೆ ರಜೆ

ಏಪ್ರಿಲ್ 26ರಂದು ಯಾವುವೆಲ್ಲಾ ಇರುತ್ತೆ?
ಆಸ್ಪತ್ರೆ, ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ
ಬಸ್, ರೈಲು ಇತ್ಯಾದಿ ಸಾರಿಗೆ ವಾಹನಗಳ ಸಂಚಾರ ಇರುತ್ತದೆ
ಖಾಸಗಿ ಸಂಸ್ಥೆಗಳು ತೆರೆದಿರುತ್ತವೆ
ಇಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ವೋಟಿಂಗ್ ಮಾಡಲು ಅನುಕೂಲ ಮಾಡಿಕೊಡಬೇಕಾಗುತ್ತದೆ. ಉದ್ಯೋಗಿಗಳು ವೋಟ್ ಹಾಕಿ ಕಚೇರಿ ಹೋಗಬಹುದು. ಮೊದಲ ಪಾಳಿ ಇದ್ದರೆ ಕಚೇರಿ ಕೆಲಸ ಮುಗಿಸಿ ಸಂಜೆ ವೋಟ್ ಹಾಕಬಹುದು.

ಏಪ್ರಿಲ್ 26ರಂದು ರಾಜ್ಯದ ಯಾವೆಲ್ಲಾ ಕ್ಷೇತ್ರಗಳಿಗೆ ಚುನಾವಣೆ?
ಬೆಂಗಳೂರು ಉತ್ತರ
ಬೆಂಗಳೂರು ಕೇಂದ್ರ
ಬೆಂಗಳೂರು ದಕ್ಷಿಣ
ಬೆಂಗಳೂರು ಗ್ರಾಮಾಂತರ
ಕೋಲಾರ
ಚಿಕ್ಕಬಳ್ಳಾಪುರ
ತುಮಕೂರು
ಮಂಡ್ಯ
ಮೈಸೂರು
ಹಾಸನ
ತುಮಕೂರು
ಚಿತ್ರದುರ್ಗ
ಉಡುಪಿ ಚಿಕ್ಕಮಗಳೂರು
ದಕ್ಷಿಣ ಕನ್ನಡ
ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ಕ್ಕೆ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Latest Indian news

Popular Stories